ನೇಸರಗಿ,18: ಸಮೀಪದ ದೇಶನೂರ ಗ್ರಾಮದ ಶ್ರೀ ಗ್ರಾಮದೇವತೆ ಜಾತ್ರಾ ಪ್ರಯುಕ್ತ ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಗದ್ದುಗೆಗೆ ತೆರಳಿ ಗ್ರಾಮದೇವತೆಯರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅವರನ್ನು ಗ್ರಾಮಸ್ಥರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾಜಿ ತಾ ಪಂ ಸದಸ್ಯ ಶ್ರೀಶೈಲ ಕಮತಗಿ,ಎಸ್ ಎಂ ಪಾಟೀಲ, ಆಡಿವಪ್ಪ ಹೊಸಮನಿ, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.