ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟ

Ravi Talawar
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟ
WhatsApp Group Join Now
Telegram Group Join Now

ದೆಹಲಿ ಅಕ್ಟೋಬರ್ 15: ಇಂದು (ಮಂಗಳವಾರ) ಮಧ್ಯಾಹ್ನ 3.30 ಕ್ಕೆ ಮಹಾರಾಷ್ಟ್ರ (Maharashtra) ಮತ್ತು ಜಾರ್ಖಂಡ್ (Jharkhand)ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ECI) ಪ್ರಕಟಿಸಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಕೂಡಿದ ಆಡಳಿತಾರೂಢ ಮಹಾಯುತಿ ಒಕ್ಕೂಟವು ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ವಿರುದ್ಧ ಸ್ಪರ್ಧಿಸಲಿದೆ.

ಜಾರ್ಖಂಡ್‌ನಲ್ಲಿ, ಇಂಡಿಯಾ ಬ್ಲಾಕ್‌ನ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್‌ಯು), ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿಯನ್ನು ಒಳಗೊಂಡಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧ ಸ್ಪರ್ಧಿಸಲಿದೆ.

WhatsApp Group Join Now
Telegram Group Join Now
Share This Article