ಮಹಿಳಾ ಮಂಡಳ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
ಮಹಿಳಾ ಮಂಡಳ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now
*
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದಲ್ಲಿ  ಘಟಸ್ಥಾಪನೆ ಹಾಗೂ ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಶ್ರೀ ಲಕ್ಷ್ಮೀ ಮಹಿಳಾ ಮಂಡಳವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಉದ್ಘಾಟಿಸಿದರು.
ಹಿಂದೂ ಸಂಪ್ರದಾಯದ ಪ್ರಕಾರ ನವರಾತ್ರಿ ಹಬ್ಬಕ್ಕೆ ಬಹಳ ಮಹತ್ವವಿದ್ದು, ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ದೊರಕಿದ್ದು ಖುಷಿ ತಂದಿದೆ. ಈ ಸಂದರ್ಭದಲ್ಲಿ ಉದ್ಘಾಟನೆಗೊಂಡಿರುವ ಮಹಿಳಾ ಮಂಡಳಿ ಸಮಾಜಮುಖಿ ಕಾರ್ಯ ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ  ಪ್ರತಿವರ್ಷ ತೆರಳುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಭಕ್ತರಿಗೆ ಅಲ್ಲಿ ಸಕಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಲ್ಲೆಡೆ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಇನ್ನೂ ಹಲವಾರು ಯೋಜನೆಗಳನ್ನು ತರಲು ಪ್ರಯತ್ನಿಸುತ್ತಿದ್ದೇನೆ. ಎಲ್ಲರ ಆಶಿರ್ವಾದವಿರಲಿ ಎಂದು ಅವರು ಹೇಳಿದರು.
ಅರುಣ ದೇವನ್, ದೀಪಕ್ ಪಾಟೀಲ, ವೈಜು ರಾಜಗೋಳ್ಕರ್, ಸುರೇಶ ಪಾಟೀಲ, ವಿನಾಯಕ ಪಾಟೀಲ, ರವಿ ಪಾಟೀಲ, ಗೋಪಾಲ ಚೌಗುಲೆ, ರೋಹನ ಪಾಟೀಲ, ಜ್ಯೋತಿಬಾ ಬಡಸ್ಕರ್, ಶಿವಾಜಿ ಗುರವ್, ಬಾಳಾರಾಮ ಕದಂ, ನಾನಾ ಪಾಟೀಲ, ಶುಭಾಂಗಿ ರಾಜಗೋಳ್ಕರ್, ವಿಮಲ ಸಾಕ್ರೆ, ಲತಾ ಶಿವಾಂಗೆಕರ್ ಮುಂತಾದವರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article