ಬೆಳಗಾವಿ: ಬೆಳಗಾವಿಯ ನಗರದ ಲೀಲೆ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹಾಕಿ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ನಿಮಿತ್ತ ಮೇಜರ್ ಧ್ಯಾನ್ ಚಂದ್ ಟ್ರೋಫಿಯನ್ನು ಆಯೋಜಿಸಲಾಗಿತ್ತು .
ಬೆಳಗಾವಿಯ ವಿವಿಧ ಕಾಲೇಜುಗಳಿಂದ ಒಟ್ಟು ಐದು ತಂಡಗಳು ಪಾಲ್ಗೊಂಡಿದ್ದವು. ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ತಂಡವು ವಿದ್ಯಾರ್ಥಿ ಅಭಿಷೇಕ ಕೊಂಕಣಿ ಅವರ ನೇತೃತ್ವದಲ್ಲಿ ಪಾಲ್ಗೊಂಡು ಅಂತಿಮ ಹಣಾಹಣಿಯಲ್ಲಿ ಪ್ರಶಸ್ತಿಯನ್ನು ಗೆದ್ದು ಮುಡಿಗೇರಿಸಿಕೊಂಡರು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಸ್. ಸಿ. ಪಾಟೀಲ್ ಅವರು ವಿದ್ಯಾರ್ಥಿಗಳ ಈ ಅಮೋಘ ಸಾಧನೆಯನ್ನು ಪ್ರಶಂಸಿಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿಶಿಷ್ಟ ಸಾಧನೆಯನ್ನು ಮಾಡುವುದರ ಮೂಲಕ ಮಹಾವಿದ್ಯಾಲಯದ ಗೌರವವನ್ನು ಹೆಚ್ಚಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಸಾಧನೆಯನ್ನು ಸಂತಸ ವ್ಯಕ್ತಪಡಿಸಿದರು.
ದೈಹಿಕ ಶಿಕ್ಷಣ ನಿರ್ದೇಶಕಿ ಕರುಣಾ ಅಮೃಸ್ಕರ್, ತರಬೇತುದಾರ ಡಾ. ಗಿರಿಜಾಶಂಕರ ಮಾನೆ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.