ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇಂದು ಆಗ್ರಾ, ತಾಜ್ಮಹಲ್ಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಕಾಲ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ. ಆಗ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ, ಮುಯಿಝು ಮತ್ತು ಅವರ ಪತ್ನಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರವಾಗಿ ರಾಜ್ಯ ಸಚಿವ ಯೋಗೇಂದ್ರ ಉಪಧ್ಯಾಯ ಅವರು ಸ್ವಾಗತಿಸಲಿದ್ದಾರೆ.
ಸೋಮವಾರ ಮುಂಜಾನೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಮುಯಿಝು ಅವರು ಹೈದರಾಬಾದ್ ಹೌಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉಭಯ ನಾಯಕರು ಹೈದರಾಬಾದ್ ಹೌಸ್‌ನಲ್ಲಿ ನಿಯೋಗ ಮಟ್ಟದ ಮಾತುಕತೆಯನ್ನೂ ನಡೆಸಿದರು. ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಪ್ರತಿನಿಧಿಗಳು ಉಪಸ್ಥಿತರಿದ್ದರು.