ಇಂಫಾಲ್, ಫೆಬ್ರುವರಿ 9: ಮಣಿಪುರ ರಾಜ್ಯದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಇಂದು ಭಾನುವಾರ ರಾಜೀನಾಮೆ ನೀಡಿದ್ದಾರೆ. ಮಣಿಪುರ ರಾಜಧಾನಿ ಇಂಫಾಲದ ರಾಜಭವನದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲ ಅವರಿಗೆ ಬಿರೇನ್ ಸಿಂಗ್ ರಾಜೀನಾಮೆ ಪತ್ರ ಸಲ್ಲಿಸಿರುವುದು ತಿಳಿದುಬಂದಿದೆ.
ಮಣಿಪುರ ರಾಜ್ಯ ಎರಡು ವರ್ಷದಿಂದ ಜನಾಂಗೀಯ ಕಲಹ ಹಾಗೂ ಹಿಂಸಾಚಾರದಿಂದ ನಲುಗುತ್ತಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲರಾಗಿದ್ದಕ್ಕೆ ರಾಜೀನಾಮೆ ನೀಡಿದ್ದಾರೋ ಎಂಬುದು ಗೊತ್ತಾಗಿಲ್ಲ. ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಳ್ವಿಕೆ ಇದೆ.