ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದೆ. 10 ಮೀ. ಏರ್ ಪಿಸ್ತೂಲ್ ಮಿಶ್ರ ವಿಭಾಗದ ಸ್ಪರ್ಧೆಯಲ್ಲಿ
ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಜೋಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮನು ಭಾಕರ್ ಎರಡು ದಿನಗಳ ಹಿಂದೆ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೊದಲ ಕಂಚಿನ ಪದಕ ಭಾರತಕ್ಕೆ ತಂದುಕೊಟ್ಟಿದರು. ಮನು ಇದೀಗ ಎರಡನೇ ಪದಕ ಮುಡಿಗೇರಿಸಿಕೊಳ್ಳುವ ಮೂಲಕ ಒಂದೇ ಒಲಿಂಪಿಕ್ಸ್ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟುಯಾಗಿದ್ದಾರೆ.
ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ 16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು.
ಸೋಮವಾರ ನಡೆದಿದ್ದ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್-ಸರಬ್ಜೋತ್ ಸಿಂಗ್ ಒಟ್ಟು 580 ಅಂಕ ಹಾಗೂ ಕೊರಿಯಾದ ಜೋಡಿ 579 ಅಂಕ ಗಳಿಸಿತ್ತು.
ಶೂಟಿಂಗ್ ವಿಭಾಗದಲ್ಲಿಯೇ ಭಾರತ ಪ್ಯಾರಿಸ್ ಒಲಿಂಪಿಕ್ಸನಲ್ಲಿ ಎರಡು ಪದಕ ತನ್ನದಗಿಸಿಕೊಂದಿದೆ.