ಓಸ್ಲೋ: ವೆನೆಜುವೆಲಾದ ಜನರ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ ಮತ್ತು ಸರ್ವಾಧಿಕಾರದಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಿ, ನ್ಯಾಯಯುತ ಹಾಗೂ ಶಾಂತಿಯುತ ಪರಿವರ್ತನೆ ತರಲು ಹೋರಾಡಿದ್ದಕ್ಕಾಗಿ ರಾಜಕಾರಣಿ ಮಾರಿಯಾ ಕೊರಿನಾ ಮಚಾದೊ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ. ಇದರೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರಿ ನಿರಾಶೆಯಾಗಿದೆ. ನಾರ್ವೇಜಿಯನ್ ನೊಬೆಲ್ ಸಮಿತಿ ಇಂದು ಪ್ರಶಸ್ತಿ ಪ್ರಕಟಿಸಿತು.
ಮಾರಿಯಾ ಕೊರಿನಾ ಮಚಾದೊಗೆ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್ಗೆ ಭಾರಿ ನಿರಾಶೆ
