ಬೆಂಗಳೂರು, ಆಗಸ್ಟ್ 19: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ದೊರೆತಿದೆ. ಇಡೀ ಪ್ರಕರಣ ಒಂದು ಷಡ್ಯಂತ್ರ ಆಗಿದ್ದು, ಇದರ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಹಾಗೂ ತಮಿಳುನಾಡಿನ ಹಾಲಿ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಸಸಿಕಾಂತ್ ಸೆಂಥಿಲ್ ಹಾಗೂ ಕಾಂಗ್ರೆಸ್ ಬಗ್ಗೆ ಮಾಡಿದ ಗಂಭೀರ ಆರೋಪದ ವಿಚಾರವಾಗಿ ಮಾತನಾಡಿ ಮಾಹಿತಿ ನೀಡಿದ್ದಾರೆ.
ಸಂಸದ ಸಸಿಕಾಂತ್ ಸೆಂಥಿಲ್ ಒತ್ತಡದ ಮೇರೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಕಾಂಗ್ರೆಸ್ ವರಿಷ್ಠರಿಗೆ ಸೆಂಥಿಲ್ ಆಪ್ತ. ಎಸ್ಐಟಿ ರಚನೆಗೆ ಒತ್ತಡ ಹಾಕಿದ್ದಾರೆ. ಅನಾಮಿಕ ಮಾಸ್ಕ್ ಮ್ಯಾನ್ ತಮಿಳುನಾಡಿನವನಾಗಿದ್ದು, ಸಸಿಕಾಂತ್ ಸೆಂಥಿಲ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ರೆಡ್ಡಿ ಆರೋಪಿಸಿದ್ದಾರೆ.