ಜಲಗಾಂವ್, ನ.15: ಮಹಾರಾಷ್ಟ್ರದ ಜಲಗಾಂವ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದು,ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ. ಜಲಗಾಂವ್ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ದಳ ತಂಡ ಹಾಗೂ ಸುತ್ತಮುತ್ತಲಿನ ಪ್ರದೇಶದ 5 ರಿಂದ 10 ಇತರ ಅಗ್ನಿಶಾಮಕ ದಳ ಸ್ಥಳ ಧಾವಿಸಿದೆ. ಬೆಂಕಿ ನಂದಿಸುವ ಪ್ರಯತ್ನಗಳು ಮುಂದುವರೆದಿವೆ. ಈ ಘಟನೆಯಿಂದ ಯಾವುದೇ ಸಾವುನೋವುಗಳ ವರದಿಯಾಗಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ಕಾರ್ಖಾನೆಯಲ್ಲಿ ರಾಸಾಯನಿಕ ವಸ್ತುಗಳು ಇರುವ ಕಾರಣ ಬೆಂಕಿ ನಂದಿಸಲು ತುಂಬಾ ಕಷ್ಟ ಎಂದು ಅಗ್ನಿಶಾಮಕ ದಳ ಹೇಳಿದೆ. ಕಾರ್ಖಾನೆ ಒಳಗೆ 12 ಜನರು ಇದ್ದರು. ಇದೀಗ ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇನ್ನು ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನು ಎಂಬುದು ಇನ್ನು ಪತ್ತೆಯಾಗಿಲ್ಲ.


