ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ 

Ravi Talawar
ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ 
WhatsApp Group Join Now
Telegram Group Join Now
ಬಳ್ಳಾರಿ ಜ 04  ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಂಚಾಳರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಹಾಗೂ ಸರಕಾರಿ ಬಸ್ ಗಳ ಪ್ರಯಾಣ  ಶೇಕಡ 15ರಷ್ಟು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ಮುಖಂಡರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು
 ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಸರಕಾರ ಪ್ರಯೋಜತ ಆತ್ಮಹತ್ಯೆಗಳು  ರಾಜ್ಯ ಸರ್ಕಾರದ ಕುಮ್ಮಿಕ್ಕಿನಿಂದ ನಿಂದ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ  ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯವನ್ನು ದಯಪಾಲಿಸಿದೆ ಭ್ರಷ್ಟಾಚಾರ ಬಯಲಾಗುವುದರಿಂದ  ವಾಲ್ಮೀಕಿ ನಿಗಮದ ಅಕೌಂಟೆಂಟ್ ಚಂದ್ರಶೇಖರ್ ಮೊದಲ ಆತ್ಮಹತ್ಯೆ ಮಾಡಿಕೊಂಡಿದ್ದು
 ಬಿಜೆಪಿ ಹೋರಾಟದಿಂದ ಅಂದಿನ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದರು ಬಳಿಕ  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿ ಎ, ಹೆಸರು ಬರೆದಿಟ್ಟು ರುದ್ರಣ್ಣ ಎಡಣ್ಣನವರ್ ಆತ್ಮಹತ್ಯೆ ಮಾಡಿಕೊಂಡಿದ್ದರು ಇಂತ ದೃಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸುತ್ತಾರೆ  ಕೂಡಲೇ ರಾಜ್ಯ ಸರ್ಕಾರ  ಸಿಬಿಐ ತನಿಖೆಗೆ ವಹಿಸಬೇಕು ಕ್ಷಣವು ತಡ ಮಾಡದೆ ಪ್ರಿಯಾಂಕ ಖರ್ಗೆ ಅವರ ರಾಜೀನಾಮೆಯನ್ನು ಪಡೆದುಕೊಳ್ಳಲೇಬೇಕು ಎಂದು ಬಿಜೆಪಿ ಮುಖಂಡರು  ಒತ್ತಾಯಿಸಿದರು
 ಪ್ರತಿಭಟನೆಯ ನಂತರ ಬಿಜೆಪಿಯ ಮುಖಂಡರು ಜಿಲ್ಲಾಧಿಕಾರಿಗಳಿಗೆ ಸವಿವಿವರವಾದ ಮನವಿ ಪತ್ರವನ್ನು ಸಲ್ಲಿಸಿದರು ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಮುಖಂಡರಾದ ಡಾ:ಮಹಿಪಾಲ್, ಕೆ ರಾಮಲಿಂಗಪ್ಪ, ವೆಂಕಟೇಶ್ ಎಚ್ ಹನುಮಂತಪ್ಪ, ಹುಂಡೇಕರ್ ರಾಜೇಶ್, ಉಳೂರು ಸಿದ್ದೇಶ್, ಸೇರಿದಂತೆ ಪಕ್ಷದ ಮಹಿಳಾ ಘಟಕದ ಮುಖಂಡರು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು
WhatsApp Group Join Now
Telegram Group Join Now
Share This Article