ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್‌ನಲ್ಲಿ ಮಂಗಳವಾರ ಭಯೋತ್ಪಾದಕ ದಾಳಿ ನಡೆದಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಇದುವರೆಗೆ 26 ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಪ್ರವಾಸಿಗರು. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತಿದೊಡ್ಡ ದಾಳಿ ಇದಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಜನರೂ ಇದ್ದಾರೆ. ಹಾಗೆಯೇ ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಎನ್ನುವ ವಿಚಾರ ಬಹಿರಂಗಗೊಂಡಿದೆ.ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.