ಬಳ್ಳಾರಿ,ಜು.15: ದುಡಿಯುವ ಬಡವರ್ಗದ ಮಹಿಳೆಯರಿಗೆ ಆತ್ಮಸ್ಥೆöÊರ್ಯ ತುಂಬಲು ನೂತನ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯು ಮಹಿಳೆಯರಿಗೆ ಹೆಚ್ಚು ಶಕ್ತಿ ತುಂಬಿ ಯಶಸ್ವಿಯಾಗಿ ಮುಂದುವರೆಯುತ್ತಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು.
ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ಮತ್ತು ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ನಗರದ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ “500 ಕೋಟಿ ಮಹಿಳೆಯರ ಪ್ರಯಾಣದ ಸಂಭ್ರಮಾಚರಣೆ”ಗೆ ಮಹಿಳೆಯರಿಗೆ ಸಿಹಿ ಹಂಚುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸರಕಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಅಡಿಯಲ್ಲಿ ಇಲ್ಲಿಯವರೆಗೆ 500 ಕೋಟಿ ಮಹಿಳೆಯರು ಪ್ರಯಾಣಿಸಿರುವುದು ಸಂಭ್ರಮದ ವಿಷಯವಾಗಿದ್ದು, ಮಹಿಳೆಯರಿಗೆ ಉತ್ತೇಜನ ನೀಡಿದೆ. ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳು ಜಾರಿಯಾಗಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೇರೆ-ಬೇರೆ ರಾಜ್ಯಗಳಿಗೂ ಕೂಡ ಮಾದರಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವರು ಟೀಕೆ-ಟಿಪ್ಪಣಿ ಮಾಡಿದ್ದರು. ಆದರೆ ರಾಜ್ಯ ಸರಕಾರವು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲ ಹಂತವಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಶಕ್ತಿ ಯೋಜನೆಯು 2023 ರ ಜೂನ್ 11 ರಂದು ಆರಂಭವಾಗಿ ಇಲ್ಲಿಯವರೆಗೆ 500 ಕೋಟಿಗಿಂತ ಹೆಚ್ಚಿನ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದು, ಇಲ್ಲಿಯವರೆಗೆ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ದಾಟಿದೆ. ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿಯೋಜನೆ, ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳನ್ನು ಎಲ್ಲ ಅರ್ಹರಿಗೆ ತಲುಪಿಸುವಲ್ಲಿ ಸರ್ಕಾರವು ಯಶಸ್ವಿಯಾಗಿದೆ ಎಂದರು.
ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಸರ್ಕಾರವು ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ ಮಧ್ಯಮ ವರ್ಗದ ಮಹಿಳೆಯರು ತನ್ನ ಕುಟುಂಬದ ಪೋಷಣೆಗಾಗಿ ಸಣ್ಣ ವ್ಯಾಪಾರ-ವಹಿವಾಟುಗಳಿಗೆ ನಗರಕ್ಕೆ ಮುಖಮಾಡಿ ಬರುವಾಗ ಅವಳ ಪ್ರಯಾಣದ ಖರ್ಚಿಗೆ ಸಹಕಾರಿಯಾಗಿ, ತಮ್ಮ ವ್ಯಾಪಾರ ವಹಿವಾಟು ನಡೆಸಲು ಅದರ ಭಾರವನ್ನು ಹೊರೆಯಾಗದಂತೆ ನಿರ್ವಹಿಸಲು ಈ ಯೋಜನೆಯು ಅನುಕೂಲವಾಗಿದೆ. ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಶಕ್ತಿ ಯೋಜನೆ ದಿಟ್ಟ ಹೆಜ್ಜೆ ಎಂದೇ ಬಿಂಬಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ. ಅವರು ಸೇರಿದಂತೆ ಗಣ್ಯರು ಮಹಿಳೆಯರಿಗೆ ಸಿಹಿ ಮತ್ತು ಸ್ಫೂರ್ತಿಧಾಯಕ ಮಹಿಳೆಯರ ಪುಸ್ತಕಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ತಾಲ್ಲೂಕು ಗ್ಯಾರೆಂಟಿ ಅಧ್ಯಕ್ಷ ನಾಗಭೂಷಣ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ, ಕೆಕೆಆರ್‌ಟಿಸಿ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಾಣಾಧಿಕಾರಿ ಇನಾಯತ್ ಭಾಗವಾನ್, ವಿಭಾಗೀಯ ಸಂಚಾರಾಧಿಕಾರಿ ಚಾಮರಾಜ, ವಿಭಾಗೀಯ ಉಸ್ತುವಾರಿಧಿಕಾರಿ ಅಯ್ಯಾಜ್, ಘಟಕದ ವ್ಯವಸ್ಥಾಪಕರಾದ ಗಂಗಾಧರ್, ಶಿವಪ್ರಕಾಶ್, ವಿಭಾಗೀಯ ಭದ್ರತಾ ಅಧಿಕಾರಿಯಾದ ಶಾರದ ಅಂಭುಜ, ವಿಭಾಗೀಯ ಜಾಗೃತಾ ಅಧಿಕಾರಿ ಬಾಷಾ, ನಿಲ್ದಾಣಾಧಿಕಾರಿಗಳಾದ ಶಿವಕುಮಾರ್, ಪಂಪಾರೆಡ್ಡಿ, ರಾಜಶೇಖರ ಸೇರಿದಂತೆ ನಿಗಮದ ಆಡಳಿತ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಇತರರು ಉಪಸ್ಥಿತರಿದ್ದರು