ಚೆನೈ, ಮಾರ್ಚ್ 28: ಲೋಕಸಭಾ ಚುನಾವಣೆಗೆ ಅವಕಾಶ ಸಿಗದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಎಂಡಿಎಂಕೆ ಪಕ್ಷದ ಹಿರಿಯ ನಾಯಕ ಈರೋಡ್ ಸಂಸದ ಗಣೇಶ ಮೂರ್ತಿ ಸಾವನ್ನಪ್ಪಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಣೇಶ ಮೂರ್ತಿ ಇಂದು ಕೊನೆಯುಸಿರೆಳೆದಿದ್ದಾರೆ.
ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರೆ, 2019 ರ ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಭಾಗವಹಿಸಿದ್ದಾರೆ. ಈ ಬಾರಿಯೂ ಸಹ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದರು.
2024ರ ಸಂಸತ್ ಚುನಾವಣೆಯಲ್ಲಿ ತಮಗೆ ಮತ್ತೊಮ್ಮೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಈ ಬಾರಿ ಎಂಡಿಎಂಕೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದೆ. ಹೀಗಾಗಿ ಟಿಕೆಟ್ ಸಿಗದ ಕಾರಣ ಮನನೊಂದು ಗಣೇಶ್ ಮೂರ್ತಿ ಮಾರ್ಚ್ 24 ರಂದು ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು
ಗಣೇಶ್ ಮೂರ್ತಿ ಅವರ ಸ್ಥಿತಿ ಅರಿತ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಆದರೆ ದುರಾದೃಷ್ಟವಶಾತ್ ಇಂದು ಬೆಳಗ್ಗೆ ಹೃದಯಘಾತವಾಗಿ ಗಣೇಶ ಮೂರ್ತಿ ಕಾಣಿಸಿಕೊಂಡಿದ್ದಾರೆ ಎಂದು ವೈದ್ಯರು ಪ್ರಕಟಿಸಿದ್ದಾರೆ.