ಮೀನಳ್ಳಿ ತಾಯಣ್ಣ ಜೆಡಿಎಸ್  ಜಿಲ್ಲಾ ಅಧ್ಯಕ್ಷರಾಗಿ ಮೂರನೇ ಬಾರಿಗೆ ನೇಮಕ

Sandeep Malannavar
ಮೀನಳ್ಳಿ ತಾಯಣ್ಣ ಜೆಡಿಎಸ್  ಜಿಲ್ಲಾ ಅಧ್ಯಕ್ಷರಾಗಿ ಮೂರನೇ ಬಾರಿಗೆ ನೇಮಕ
WhatsApp Group Join Now
Telegram Group Join Now
ಬಳ್ಳಾರಿ, ಫೆ.09: ಮೀನಳ್ಳಿ ತಾಯಣ್ಣ ಅವರು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ಮೂರನೇ ಬಾರಿಗೆ ನೇಮಕಗೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರು ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನೂತನ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ.
ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗಣಿ ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಪಕ್ಷವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಆಶಿಸಿದ್ದಾರೆ.
. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶಂಪುರ, ನಾಡಗೌಡ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮೊದಲಾದವರು ಇದ್ದರು.
WhatsApp Group Join Now
Telegram Group Join Now
Share This Article