ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಕೃಷಿ ಮೇಳ ಸಿದ್ಧತೆ ಕುರಿತು ಸ್ಥಳ ಪರಿಶೀಲನೆ ಮಾಡಿ, ಅರ್ಥಪೂರ್ಣ ಕೃಷಿ ಮೇಳ ಅಯೋಜನೆಗಾಗಿ, ಕುಲಪತಿಗಳ ಸಭಾಂಗಣದಲ್ಲಿ ವಿವಿ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ಅಧಿಕಾರಿಗಳು ಉಸ್ಥಿತರಿದ್ದರು.