ಬೆಳಗಾವಿ ಗ್ರಾಮ ಪಂಚಾಯತವೊಂದರ ಕಾರ್ಯದರ್ಶಿ ಮೇಲೆ ಎಮ್‌ಇಎಸ್‌ ಪುಂಡರು ಹಲ್ಲೆ

Ravi Talawar
ಬೆಳಗಾವಿ ಗ್ರಾಮ ಪಂಚಾಯತವೊಂದರ ಕಾರ್ಯದರ್ಶಿ ಮೇಲೆ ಎಮ್‌ಇಎಸ್‌ ಪುಂಡರು ಹಲ್ಲೆ
WhatsApp Group Join Now
Telegram Group Join Now

ಬೆಳಗಾವಿ, ಮಾರ್ಚ್ 11: ಬೆಳಗಾವಿ (Belagavi) ಗಡಿಯಲ್ಲಿ ಕೆಎಸ್ಆರ್ಟಿಸಿ (KSRTC) ಬಸ್ ಕಂಡಕ್ಟರ್ ಮೇಲೆ ಎಂಇಎಸ್ (MES)ಪುಂಡರು ಹಲ್ಲೆ ನಡೆಸಿದ ಪ್ರಕರಣ ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಆ ಘಟನೆಯ ಈ ಕಹಿ ನೆನಪು ಮಾಸುವ ಮುನ್ನವೇ, ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಮತ್ತೆ ಮೇರೆಮೀರಿದೆ. ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ, ತಾವು ಹೇಳಿದ ಕೆಲಸ ಮಾಡಿಲ್ಲ ಎಂಬ ಕಾರಣಕ್ಕೆ ಎಂಇಎಸ್ ಪುಂಡರು ದಾಳಿ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಗೋಜಗಾ ಸಮೀಪ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಅಂಬೇವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್ ಪಾಟೀಲ್, ಹಾಲಿ ಅಧ್ಯಕ್ಷರ ಪುತ್ರ ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಹಲ್ಲೆ ಮಾಡಿದೆ ಎನ್ನಲಾಗಿದೆ.

‘ನಾವು ಹೇಳಿದ ಹಾಗೆ ನೀವು ಕೆಲಸ ಮಾಡಬೇಕು. ಇಲ್ಲದಿದ್ದರೆ ಲಂಚ ಪಡೆದಿದ್ದೀಯಾ ಎಂಬುದಾಗಿ ಕೇಸ್ ಹಾಕುತ್ತೇವೆ’ ಎಂದು ಹಲ್ಲೆಕೋರರು ಧಮ್ಕಿ ಹಾಕಿದ್ದಾರೆ. ಚೇತನ್ ಪಾಟೀಲ್, ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಮತ್ತು ಎಂಇಎಸ್​ ಪುಂಡರು ಜತೆಯಾಗಿ ಹಲ್ಲೆ ಮಾಡಿದ್ದಾರೆ. ಚೇತನ್ ಪಾಟೀಲ್ ಎಂಇಎಸ್ ಜಿಲ್ಲಾ ಸಂಚಾಲಕರೂ ಆಗಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಕಂಡಕ್ಟರ್ ಮೇಲೆ ಹಲ್ಲೆ ನಡೆದಿತ್ತು. ಈಗ, ತಾವು ಹೇಳಿದಂತೆ ಅಕ್ರಮ ಕೆಲಸ ಮಾಡಿಲ್ಲ ಎಂದು ದಾಳಿ ನಡೆಸಲಾಗಿದೆ ಗಾಯಾಳು ನಾಗಪ್ಪ ಅವರನ್ನು ಸದ್ಯ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

WhatsApp Group Join Now
Telegram Group Join Now
Share This Article