ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರ ಬಳಿಕ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಹೊನ್ನಾವರದಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.