ಪೇಶಾವರ, ಆಗಸ್ಟ್ 14: ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಪೇಶಾವರದಲ್ಲಿ ಉಗ್ರರ ದಾಳಿ ನಡೆದಿದ್ದು, ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.ವಾಯುವ್ಯ ಪೇಶಾವರದ ಹೊರವಲಯದಲ್ಲಿರುವ ಪೊಲೀಸ್ ಠಾಣೆಯ ಮೇಲೆ ಅಪರಿಚಿತ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ.ಪ್ರಾಣ ಕಳೆದುಕೊಂಡ ಪೊಲೀಸ್ ಅಧಿಕಾರಿಯನ್ನು ಕಾನ್ಸ್ಟೆಬಲ್ ಅಬು ಬಕರ್ ಎಂದು ಗುರುತಿಸಲಾಗಿದ್ದು, ಹರೂನ್ ಎಂಬ ಅಧಿಕಾರಿ ದಾಳಿಯಲ್ಲಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಪೇಶಾವರದಲ್ಲಿ ಉಗ್ರರ ದಾಳಿ

ಪಿಟಿಐ ವರದಿ ಪ್ರಕಾರ, ಮಾರಕ ಆಯುಧಗಳನ್ನು ಹೊಂದಿದ್ದ ಭಯೋತ್ಪಾದಕರು ಪೇಶಾವರದಿಂದ ನೈಋತ್ಯಕ್ಕೆ ಸುಮಾರು 30 ಕಿ.ಮೀ ದೂರದಲ್ಲಿರುವ ಹಸನ್ ಖೇಲ್ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದಾರೆ. ಪೊಲೀಸರು ದಾಳಿಗೆ ಪ್ರತಿದಾಳಿ ನಡೆಸಿದರು, ಇದು ಅವರ ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿಗೆ ಕಾರಣವಾಯಿತು. ದಾಳಿಯ ನಂತರ, ಎಚ್ಚರಿಕೆಯನ್ನು ನೀಡಲಾಗಿದ್ದು, ಈ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳನ್ನು ಬೆಂಬಲಿಸಲು ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದೆ.