ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ

Ravi Talawar
ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ
WhatsApp Group Join Now
Telegram Group Join Now

ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ ಹಾಕಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಮೋದಿ ಫ್ರಾನ್ಸ್, ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ ಈ ಬೆದರಿಕೆ ಬಂದಿತ್ತು. ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂಬ ಎಚ್ಚರಿಕೆಯ ಕರೆ ಮುಂಬೈ ಪೊಲೀಸರಿಗೆ ಬಂದಿತ್ತು.

ಫೆಬ್ರವರಿ 11 ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂದು ಎಚ್ಚರಿಸಲಾಗಿದೆ. ಮಾಹಿತಿಯ ಗಂಭೀರ ಸ್ವರೂಪವನ್ನು ಪರಿಗಣಿಸಿ, ಪೊಲೀಸರು ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದರು ಎಂದು ಎಎನ್​ಐ ವರದಿ ಮಾಡಿದೆ.

ಪ್ರಧಾನಿ ಮೋದಿ ಅವರ ವಿಮಾನದ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದ ನಂತರ, ಭದ್ರತಾ ಪಡೆಗಳ ತಂಡಗಳು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪ್ರಾರಂಭಿಸಿದವು. ಕರೆ ಮಾಡುತ್ತಿರುವ ವ್ಯಕ್ತಿ ಯಾರೆಂದು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ.

ಪ್ರಧಾನಿ ಮೋದಿ ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಲ್ಲಿದ್ದಾರೆ. ಫೆಬ್ರವರಿ 12 ರಿಂದ 14 ರವರೆಗೆ ಪ್ರಧಾನಿ ಮೋದಿ ಫ್ರಾನ್ಸ್‌ನಲ್ಲಿ ನೆಲೆಸಿರುವ ಮೋದಿ ಇಂದು ಅಮೆರಿಕಕ್ಕೆ ತೆರಳಲಿದ್ದಾರೆ. ಈ ಸಮಯದಲ್ಲಿ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ.

WhatsApp Group Join Now
Telegram Group Join Now
Share This Article