ಪ್ರಸಿದ್ಧ ಪುಣ್ಯಕ್ಷೇತ್ರ, ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಸ್ಥಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಗುರುವಾರ ಸಂಜೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಹಾಸನ ತಹಸೀಲ್ದಾರ್ ಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.