ಸಚಿವ ಜಮೀರ್‌ ಅಹ್ಮದ್‌ ಖಾನ್‌ ಗೆ 2.5 ಕೋಟಿ ರೂ. ಸಾಲ; ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ

Ravi Talawar
ಸಚಿವ ಜಮೀರ್‌ ಅಹ್ಮದ್‌ ಖಾನ್‌ ಗೆ 2.5 ಕೋಟಿ ರೂ. ಸಾಲ; ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ
WhatsApp Group Join Now
Telegram Group Join Now

ಬೆಂಗಳೂರು: ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ 2.5 ಕೋಟಿ ರೂ. ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಸಿಕ್ಕಿದೆ. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್‌ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ಸಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್‌ ಅಹ್ಮದ್‌ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
Share This Article