ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ಅದಕ್ಕೆ ರಾಜ್ಯಪಾಲರೇ ಹೊಣೆ: ಸಚಿವ ಜಮೀರ್ ಅಹ್ಮದ್ ಖಾನ್

Ravi Talawar
ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ಅದಕ್ಕೆ ರಾಜ್ಯಪಾಲರೇ ಹೊಣೆ: ಸಚಿವ ಜಮೀರ್ ಅಹ್ಮದ್ ಖಾನ್
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​ 19: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ಅದಕ್ಕೆ ರಾಜ್ಯಪಾಲರೇ ಹೊಣೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್  ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಅವರು ಅನುಮತಿ ನೀಡಿದ್ದನ್ನು ವಿರೋಧಿಸಿ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಮೀರ್​, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಬಿಜೆಪಿ, ಜೆಡಿಎಸ್​ ಏನೇ ಮಾಡಿದರೂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಆಗಲ್ಲ. ವರಿಷ್ಠರು, ರಾಜ್ಯದ ಏಳು ಕೋಟಿ ಜನ ಸಿಎಂ ಪರವಾಗಿ ಇದ್ದಾರೆ. ಏನಾದರೂ ಗಲಾಟೆ, ಹಲ್ಲೆಯಾದ್ರೆ ಅದಕ್ಕೆ ರಾಜ್ಯಪಾಲರೇ ಹೊಣೆ. ಕರ್ನಾಟಕದ ಜನ ಸುಮ್ಮನೆ ಕೂರಲ್ಲ ಎಂದರು.

ಹಿಂದುಳಿದ ವರ್ಗದ ನಾಯಕನಾಗಿರುವುದಕ್ಕೆ ಸಿಎಂ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಸಂವಿಧಾನ ವಿರುದ್ಧವಾಗಿ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರದಲ್ಲೇ ಕಾಲದಲ್ಲಿ 14 ನಿವೇಶನ ಕೊಟ್ಟಿದ್ದಾರೆ. ಸಿಎಂ ಪಾಪ್ಯುಲಾರಿಟಿ ಸಹಿಸಲಾಗದೆ ಸರ್ಕಾರ ತೆಗೆಯಲು ಯತ್ನಿಸಲಾಗುತ್ತಿದೆ. ಬಿಜೆಪಿಯವರಿಗೆ ಜನ ಯಾವತ್ತೂ ಬಹುಮತ ನೀಡಿಲ್ಲ ಎಂದು ಗುಡುಗಿದರು.

ಮುಖ್ಯಮಂತ್ರಿಯಾಗಿದ್ದ ವೇಳೆ ಯಾರಾದರೂ ಜೈಲಿಗೆ ಹೋಗಿದ್ದರೆ ಅದು ಬಿಎಸ್ ಯಡಿಯೂರಪ್ಪ ಅವರು. ಯಾವ ದೂರಿನ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಕೇಳಿದ್ದರೂ ಯಾಕೆ ಅನುಮತಿ ಕೊಟ್ಟಿಲ್ಲ. ನಮಗೆ ನ್ಯಾಯಾಲಯದ ಮೇಲೆ ವಿಶ್ವಾಸವಿದೆ ಎಂದರು.

WhatsApp Group Join Now
Telegram Group Join Now
Share This Article