ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.10ರಷ್ಟು ಮೀಸಲಾತಿ ಏರಿಕೆ ಪ್ರಸ್ತಾಪ; ಪರಿಶೀಲನೆಗೆ ಸಚಿವ ಜಮೀರ್‌ ಸೂಚನೆ

Ravi Talawar
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.10ರಷ್ಟು ಮೀಸಲಾತಿ ಏರಿಕೆ ಪ್ರಸ್ತಾಪ; ಪರಿಶೀಲನೆಗೆ ಸಚಿವ ಜಮೀರ್‌ ಸೂಚನೆ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 13: ಸಿಎಂ ಸಿದ್ದರಾಮಯ್ಯ  ಮುಸ್ಲಿಮರನ್ನು ಅತಿಯಾಗಿ ಓಲೈಕೆ ಮಾಡುತ್ತಾರೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರ (Congress govt) ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗುವ ಸುಳಿವು ದೊರೆತಿದೆ. ಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4 ರ ಮೀಸಲಾತಿ ಘೋಷಣೆಯಾದ ಬೆನ್ನಲ್ಲೇ ಇದೀಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ 10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್​ಗೆ ಸಂಘಟನೆಗಳು ಮನವಿ ಮಾಡಿದ್ದವು. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಂಜಿನಿಯರ್ಸ್ ಅಸೋಸಿಯೇಷನ್‌ನಿಂದ ಮನವಿ ಸಲ್ಲಿಕೆಯಾಗಿತ್ತು. ಈ ಮನವಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ವಿಶೇಷ ಕರ್ತವ್ಯಾಧಿಕಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಮಂಡಿಸಿದ್ದ 2025-26ನೇ ಸಾಲಿನ ಬಜೆಟ್​ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಿದ್ದರಾಮಯ್ಯ ಭರ್ಜರಿ ಕೊಡುಗೆಗಳನ್ನು ನೀಡಿದ್ದರು.ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೂ ಶೇ 4ರಷ್ಟು ಮೀಸಲಾತಿ ಕಲ್ಪಿಸಿ ಘೋಷಣೆ ಮಾಡಿದ್ದರು. ಇದೀಗ ಬಜೆಟ್ ಘೋಷಣೆಯ ಬೆನ್ನಲ್ಲೇ ಮುಸ್ಲಿಮರಿಗೆ ಮತ್ತೊಂದು ಕೊಡುಗೆ ನೀಡಲು ಸರ್ಕಾರ ಮುಂದಾಗಿರುವಂತಿದೆ.

WhatsApp Group Join Now
Telegram Group Join Now
Share This Article