ಬೆಂಗಳೂರು, ಫೆಬ್ರವರಿ 25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಈ ಬಗ್ಗೆ ವಿವರಣೆ ನೀಡಿದರು. ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ)ಎಸ್ಕಾಂಗಳು ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸ್ಪಷ್ಟಪಡಿಸಿದ್ದಾರೆ.