ಬೆಂಗಳೂರು, ಆಗಸ್ಟ್ 11: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ ಸಚಿವ ಕೆಎನ್ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದು ಹೇಳಿದರು.
ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ!
