ಬೆಂಗಳೂರು, ಅಕ್ಟೋಬರ್ 25: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಹೇಳಿದ್ದಾರೆ. ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಅರ್ಹತೆಗೂ ಮೀರಿ ಅವಕಾಶಗಳನ್ನು ಪಕ್ಷ ನೀಡಿದೆ. ನನ್ನನ್ನು ಗುರುತಿಸಿ ಸಾಕಷ್ಟು ಅವಕಾಶಗಳನ್ನು ಕೊಟ್ಟಿರುವುದಕ್ಕೆ ಆಭಾರಿಯಾಗಿದ್ದೇನೆ. ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ದ ಎಂದು ಅವರು ಹೇಳಿದ್ದಾರೆ.


