ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ

Ravi Talawar
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ
WhatsApp Group Join Now
Telegram Group Join Now
ಬೆಂಗಳೂರು: ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಿಸಿ ಒಂದು ವರ್ಷ ಪೂರೈಸಿದ ಪ್ರಯುಕ್ತ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬಸವಲಿಂಗ ಪಟ್ಟದೇವರು ಸ್ವಾಮೀಜಿ  ಸನ್ಮಾನಿಸಿದರು.
ರಾಜ್ಯದ 30 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಿಂದ ನಡೆಸಿದ ಬಸವ ಸಂಸ್ಕೃತಿ ಅಭಿಯಾನ ಬೆಂಗಳೂರಿನಲ್ಲಿ ಭಾನುವಾರ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ 300ಕ್ಕೂ ಅಧಿಕ ಮಠಾಧೀಶರು,‌ ಸಾವಿರಾರು ಬಸವ ಅನುಯಾಯಿಗಳು ಭಾಗವಹಿಸಿದ್ದರು.
‘ಬಸವ ಸಂಸ್ಕೃತಿ ಅಭಿಯಾನವು ಜಾಗೃತಿ ಅಭಿಯಾನವಾಗಿದ್ದು, ಜನಮಾನಸದಲ್ಲಿ ಬಸವಣ್ಣನ ತತ್ವವನ್ನು ಅಚ್ಚೊತ್ತುವಂತೆ ಮಾಡುವುದು. ಬಸವತತ್ವದಲ್ಲಿ ಜನರು ಹೆಜ್ಜೆ ಇಡುವಂತೆ ಮಾಡುವುದು ಇದರ ಉದ್ದೇಶವಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಹ ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ನಾಡಿನ ವಿವಿಧ ಮಠಾಧೀಶರು, ಸಚಿವರಾದ ಎಂ.ಬಿ.ಪಾಟೀಲ್, ಡಾ.ಶರಣ್ ಪ್ರಕಾಶ್ ಪಾಟೀಲ್, ಕೆ.ಎಚ್.ಮುನಿಯಪ್ಪ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಶಾಸಕ ಬಾಬಾ ಸಾಹೇಬ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ನ್ಯಾಯಮೂರ್ತಿ ನಾಗಮೋಹನ್ ದಾಸ್, ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಗೋ.ರು.ಚನ್ನಬಸಪ್ಪ ಸೇರಿದಂತೆ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article