ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೊಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡರು.
ದೇವಿಗೆ ವಿಶೇಷ ಸಲ್ಲಿಸಿ, ನಾಡಿನ ಸುಖ, ಶಾಂತಿ, ಸಮೃದ್ಧಿ ಮತ್ತು ಸೌಹಾರ್ದತೆಗಾಗಿ ಸಚಿವರು ಪ್ರಾರ್ಥಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, ನಾಗೇಶ ದೇಸಾಯಿ, ನೀಲೇಶ ಚಂದಗಡಕರ್, ಸುರೇಶ ಪಾಟೀಲ, ರಾಕೇಶ್ ಪಾಟೀಲ, ರಾಜು ಪಾಟೀಲ, ಶಿವು ಸೈಬಣ್ಣವರ್, ಶೀಲಾ ತಿಪ್ಪಣ್ಣಗೋಳ, ಸುರೇಶ ಕಟಬುಗೋಳ, ಮಹೇಶ ಸುಗಣೆಣ್ಣವರ್, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮುಖಂಡರು ಇದ್ದರು.