ಬೆಳಗಾವಿ: ಬಡಾಲ ಅಂಕಲಗಿ ಗ್ರಾಮದ ಶ್ರೀ ಜೋಡಿ ಮಹಾಲಕ್ಷೀ ದೇವಿಯರ ಜಾತ್ರಾ ಮಹೋತ್ಸವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡು, ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.
ಜಾತ್ರೆಯಲ್ಲಿ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಜಾತ್ರೆ ಸುಗಮವಾಗಿ ನಡೆಯಲಿ. ಗ್ರಾಮಕ್ಕೆ ಒಳಿತಾಗಲಿ ಎಂದು ಸಚಿವರು ಪ್ರಾರ್ಥಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತಿತರರು ಇದ್ದರು.