ಬೆಳಗಾವಿ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಸೂಚಿಸಿದರು.
ನಿನ್ನೆ ಮಲೈಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದ ಲಕ್ಷ್ಮೀ ಹೆಬ್ಬಾಳಕರ್, ರಾತ್ರಿಯೇ ಬೆಂಗಳೂರಿಗೆ ತೆರಳಿ ಅಲ್ಲಿಂದ ಇಂದು
ಬೆಳಗ್ಗೆ ಬೆಳಗಾವಿಗೆ ಆಗಮಿಸಿ ವಿಶ್ರಾಂತಿಯನ್ನೂ ಪಡೆಯದೆ ಸಾರ್ವಜನಿಕರ ಅಹವಾಲು ಆಲಿಸಿದರು.
ಬಹಳಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು