ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮಹಿಳಾ ಮೇಲ್ವಿಚಾರಕಿ ಹುದ್ದೆಗೆ ಮುಂಬಡ್ತಿ ನೀಡುವ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಭೆ ನಡೆಸಿದರು.
ಮಕ್ಕಳ ಅಪೌಷ್ಟಿಕತೆ ನಿವಾರಣೆ ಹಾಗೂ ಮಕ್ಕಳ ಬೆಳವಣಿಗೆ ಮೇಲ್ವಿಚಾರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು.
ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕ ಟಿ.ರಾಘವೇಂದ್ರ, ಉಪ ಕಾರ್ಯದರ್ಶಿ ಬಲರಾಮ್, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ವಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.