ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರಿಗೆ ಹೂಗುಚ್ಛ ನೀಡಿದ ಸಚಿವರು
 *ಮಂಗಳೂರು:* ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಿದರು.
ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಡಿಸಿಪಿಗಳಾದ ಮಿಥುನ್‌ ಹಾಗೂ ರವಿಶಂಕರ್ ಅವರನ್ನು ಸಚಿವರು ಅಭಿನಂದಿಸಿದರು.
ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಸಚಿವರು, ಹಿರಿಯ ನಾಗರಿಕರಿಗೆ ವಂಚನೆ ಆಗುವುದು ತಪ್ಪಿತು. ಉತ್ತಮ ಕೆಲಸ ಮಾಡಿದ ನಿಮ್ಮ ಸೇವೆ ಹೀಗೆ ಮುಂದುವರಿಯಲಿ ಎಂದು‌‌ ಹೇಳಿದರು.
ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ‌ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article