ಗ್ರಾಮೀಣ ಕ್ಷೇತ್ರ ರಾಜ್ಯದಲ್ಲಿ ಮಾದರಿಯಾಗಿಲಿ : ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್

Hasiru Kranti
ಗ್ರಾಮೀಣ ಕ್ಷೇತ್ರ ರಾಜ್ಯದಲ್ಲಿ ಮಾದರಿಯಾಗಿಲಿ : ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್
WhatsApp Group Join Now
Telegram Group Join Now

ಬೆಳಗಾವಿ : ಪ್ರತಿ ಗ್ರಾಮಗಳ ರಸ್ತೆ, ಶಾಲೆಗಳಲ್ಲಿ ಆಟದ ಮೈದಾನ, ಶೌಚಾಲಯ, ಕಂಪೌಂಡ, ಚರಂಡಿ, ಸೇರಿದಂತೆ ಇತರ ಎಲ್ಲ ಕಾಮಗಾರಿಗಳನ್ನು ಅಭಿವೃದ್ಧಿಪಡಿಸುವ ಮೂಲಕ ಗ್ರಾಮೀಣ ಕ್ಷೇತ್ರವನ್ನು ರಾಜ್ಯದಲ್ಲಿ ಮಾದರಿ ಕ್ಷೇತ್ರವಾಗುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದರು.

ನಗರದ ಸಚಿವರ ಗೃಹ ಕಛೇರಿಯಲ್ಲಿ (ಡಿ.23) ರಂದು ಮಂಗಳವಾರ ಜರುಗಿದ  ಗ್ರಾಮೀಣ ಕ್ಷೇತ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾ‌ಜ್ ಇಲಾಖೆಯ ಪ್ರಗತಿ ಪರಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ, ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು.  ಕಾಲಕಾಲಕ್ಕೆ ಅಂಗನವಾಡಿ ಮತ್ತು ಶಾಲೆಗಳಿಗೆ ಭೇಡಿ ನೀಡಿ ಮಕ್ಕಳಿಗೆ ನೀಡುವ ಆಹಾರ ಸೇರಿದಂತೆ ಎಲ್ಲ ಸೌಕರ್ಯಗಳನ್ನು ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು.‌

ಗ್ರಾಮೀಣ ಭಾಗದಲ್ಲಿ ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಅಕ್ಕಾ ಕೆಪೆಗಳನ್ನು ಪ್ರಾರಂಭ ಮಾಡಿ, ಕೆಪೆ ನಿರ್ವಹಣೆಗೆ ಎಸ್‌ಸಿ ಮತ್ತು ಎಸ್ಟಿ ವರ್ಗದವರಿಗೆ ಕೆಲಸ ನೀಡಿ ಇದರಿಂದ ಆರ್ಥಿಕ ಹಿಂದುಳಿದ ವರ್ಗಗಳು ಆರ್ಥಿಕವಾಗಿ ಸಬಲಾರಗಲು ಸಾಧ್ಯವಾಗುತ್ತದೆ. ಎಲ್ಲ ಗ್ರಾಮ ಪಂಚಾಯತಿಗಳಲ್ಲಿ15ನೇ ಹಣಕಾಸು ಖರ್ಚಾಗಬೇಕು 15ನೇ ಹಣಕಾಸಿನಲ್ಲಿ ವಿಶೇಷ ಚೇತನರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು.  ಬೇಸಿಗೆ ಪ್ರಾರಂಭವಾಗುವ ಮುಂಚಿತವಾಗಿ ಕುಡಿಯುವ ನೀರಿನ ಬಗ್ಗೆ ಗಮನಹರಿಸಿ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕಂದು ಹೇಳಿದರು.

ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶಂತಕುಮಾರ ಅವರು ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರೊಂದಿಗೆ ಬೆರೆತು ಗ್ರಾಮದ ಎಲ್ಲ ಸಮಸ್ಸೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೆಕು. ಸಚಿವರ ಸೂಚನೆಯಂತೆ ಎಲ್ಲ ಯೋಜನೆಗಳನ್ನು ರೂಪಿಸಿ ತಾಲ್ಲೂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಹೇಳಿದರು.

ಈ ವೇಳೆ ಸಹಾಯಕ ನಿರ್ದೇಶಕರು (ಗ್ರಾಉ) ಬಿಡಿ ಕಡೆಮನಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕ ಪಂಚಾಯತ ಅಧಿಕಾರಿಗಳು ಮತು ಸಿಬ್ಬಂದಿಗಳು,  ತಾಂತ್ರಿಕ ಸಿಬ್ಬಂದಿಗಳು, ಬಿಎಪ್‌ ಟಿ, ಗ್ರಾಮ ಕಾಯಕ ಮಿತ್ರರು  ಹಾಜರಿದ್ದರು.

WhatsApp Group Join Now
Telegram Group Join Now
Share This Article