ಬೆಳಗಾವಿ : ಸಾಂಬ್ರಾ ಗ್ರಾಮದಲ್ಲಿ ಸುಮಾರು 2 ಕೋಟಿ ರೂ,ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂಜೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕಾಂಕ್ರೀಟ್ ಹಾಗೂ ಡಾಂಬರ್ ರಸ್ತೆ, ಪೇವರ್ಸ್ ಅಳವಡಿಕೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರ ಆಸ್ತಿಗಳಿಗೆ ಯಾವುದೇ ತೊಂದರೆಗಳಾಗದಂತೆ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.


