ಲಸಿಕಾ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

Ravi Talawar
ಲಸಿಕಾ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
WhatsApp Group Join Now
Telegram Group Join Now
ಬೆಳಗಾವಿ :  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಚಾಲನೆ ನೀಡಿದರು.
ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಕಾಲುಬಾಯಿ ರೋಗದಿಂದ ರಾಜ್ಯವನ್ನು ಮುಕ್ತ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಅಭಿಯಾನ ಯಶಸ್ವಿಯಾಗಲಿ ಎಂದು ಹಾರೈಸಿದ ಸಚಿವರು, ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಪಶುಪಾಲನಾ ಮತ್ತು ವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರಾದ ಡಾ.ರಾಜು ಎ‌ನ್ ಕೂಲರ್, ಬೆಳಗಾವಿಯ ಮುಖ್ಯ ಪಶು ವೈದ್ಯಾಧಿಕಾರಿ ಡಾ.ರೆಹಮತ್ವುಲ್ಲಾ, ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ.ಆನಂದ ಪಾಟೀಲ, ಉಚಗಾಂವ ಗ್ರಾಮದ ಮುಖ್ಯ ಪಶು ವೈದ್ಯಾಧಿಕಾರಿ ಡಾ.ದೀಪಕ್ ಯಲಿಗಾರ್, ಅಂಬೇವಾಡಿ ಗ್ರಾಮದ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಪ್ರತಾಪ್ ಹನೂರಕರ್ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article