ಬೆಳಗಾವಿ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ವಿವಿಧ ಸ್ಥಳಗಳಿಂದ ಆಗಮಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.
ಆಗಮಿಸಿದ್ದ ನೂರಾರು ಜನರು ಸಾರ್ವಜನಿಕ ಹಾಗೂ ವಯಕ್ತಿಕ ಸಮಸ್ಯೆಗಳನ್ನು ಹೊತ್ತು ತಂದಿದ್ದರು. ಅನೇಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.
ಎಲ್ಲವನ್ನೂ ಸಮಾಧಾನದಿಂದ ಆಲಿಸಿದ ಸಚಿವರು ಸಾಧ್ಯವಾದಷ್ಟು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.