ದೇಶ ಕಟ್ಟಿದ ಕಾಂಗ್ರೆಸ್ ಪಕ್ಷ ಬೆಂಬಲಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
ದೇಶ ಕಟ್ಟಿದ ಕಾಂಗ್ರೆಸ್ ಪಕ್ಷ ಬೆಂಬಲಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now

ಶಿಗ್ಗಾವಿ: ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಏನೂ ಗೊತ್ತಿಲ್ಲ. ಸುಳ್ಳೇ ಅವರ ಮನೆ ದೇವರು‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ನಿಮಿತ್ತ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಜನರ ದಾರಿ ತಪ್ಪಿಸುವುದೇ ಬಿಜೆಪಿಯವರ ಅಜೆಂಡಾ ಎಂದು ಟೀಕಿಸಿದರು.

ಕಳೆದ ಐದು ದಿನಗಳಿಂದ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಉತ್ತಮ ವಾತಾವರಣವಿದೆ, ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ‌ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕುಂದೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಚಾರ ಮಾಡಿರುವೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ, ಕಾಂಗ್ರೆಸ್ ಅಭ್ಯರ್ಥಿ ಗೆಲುವು ಶತಸಿದ್ಧ. ಈ ಉಪ‌ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದರು‌.

ಕಳೆದ ಚುನಾಚಣೆಯಲ್ಲಿ ಸೋತರೂ ಜನರೊಂದಿಗೆ ಬೆರೆತು ಕ್ಷೇತ್ರದ ಸೇವೆ ಮಾಡುತ್ತಾ ಬಂದಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್, ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ. ಇಂಥ ವ್ಯಕ್ತಿಯನ್ನು ಬೆಂಬಲಿಸಿ ಶಾಸಕನಾಗಿ ಆಯ್ಕೆ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 77 ವರ್ಷ ಆಗಿದೆಯೇ ಹೊರತು 11‌ ವರ್ಷ‌‌ ಅಲ್ಲ. ‌ಸ್ವಾತಂತ್ರ್ಯ ಸಿಕ್ಕಾಗ ಭಾರತ ಬಡ ರಾಷ್ಟ್ರವಾಗಿತ್ತು, ಇದೀಗ ವಿಶ್ವ ಭೂಪಟದಲ್ಲಿ ತನ್ನದೇ ಆದ ಸ್ಥಾನ ಪಡೆದಿದೆ. ಅಂಗನವಾಡಿಯಿಂದ ಹಿಡಿದು ಆಸ್ಪತ್ರೆ, ವಿಶ್ವವಿದ್ಯಾಲಯವರೆಗೂ ಸ್ಥಾಪಿಸಿದ್ದು‌ ಕಾಂಗ್ರೆಸ್ ‌ಪಕ್ಷ. ಸುಳ್ಳು ಹೇಳುವುದನ್ನು ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ಗೊತ್ತಿಲ್ಲ ಎಂದು ಸಚಿವೆ‌ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡಿರುವ‌ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಸರ್ವಧರ್ಮದವರಿಗೂ ಸಲ್ಲುವ ಪಕ್ಷ ಕಾಂಗ್ರೆಸ್, ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ ಎಂದು ಸಚಿವರು ಭವಿಷ್ಯ ನುಡಿದರು.

ಈ‌ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ‌ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಎಚ್.ಕೆ.ಪಾಟೀಲ್, ‌ಶಿವರಾಜ್ ತಂಗಡಗಿ, ಮಂಕಾಳ್ ವೈದ್ಯ, ಕೆ.ಎಚ್. ಮುನಿಯಪ್ಪ,‌ ಭೈರತಿ ಸುರೇಶ್, ‌ಡಿ.ಸುಧಾಕರ್, ಆರ್.ಬಿ.ತಿಮ್ಮಾಪೂರ್,‌ ರಹೀಂ‌ ಖಾನ್, ಮಾಜಿ‌ ಸಚಿವ ಪ್ರಕಾಶ್ ಹುಕ್ಕೇರಿ ಸೇರಿದಂತೆ ಹಲವು ಶಾಸಕರು, ‌ಮಾಜಿ‌ ಶಾಸಕರು, ಮುಖಂಡರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article