ದುರ್ಗಾದೇವಿ ದರ್ಶನ ಆಶೀರ್ವಾದ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
ದುರ್ಗಾದೇವಿ ದರ್ಶನ ಆಶೀರ್ವಾದ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now
ಬೆಳಗಾವಿ29: ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ‌ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ‌ ದುರ್ಗಾದೇವಿ ಮಂದಿರಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಯ ದರ್ಶನ ಆಶೀರ್ವಾದ ಪಡೆದರು.
ಮೊನ್ನೆಯಷ್ಟೇ ಈ ದೇವಸ್ಥಾನದ ವಾಸ್ತುಶಾಂತಿ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ‌.  ಈ ಸಮಯದಲ್ಲಿ  ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಮಹಿಳೆಯರು, ಮಕ್ಕಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article