ಳಗಾವಿ, ಆಗಸ್ಟ್ 30: ಬೆಳಗಾವಿ ಹಾಗೂ ಹುಬ್ಬಳ್ಳಿ ಮಧ್ಯದಲ್ಲಿ ನೂರು ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಗೋವಾ ಹೆದ್ದಾರೆ ಮೇಲೆ ಫೌಂಡ್ರಿ ಪಾರ್ಕ್ ಮಾಡುತ್ತೇವೆ. ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ರಾಜಧಾನಿಯಾಗಿ ಗುರುಸಿಕೊಂಡಿದೆ. ಅಲ್ಲಿ ಕೂಡ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ. ಯುವ ಉದ್ಯಮಿಗಳಿಗೆ ಈ ಯೋಜನೆ ಅನಕೂಲವಾಗಲಿದೆ ಎಂದು ಹೇಳಿದ್ದಾರೆ.
ಬೆಳಗಾವಿ ಹಾಗೂ ಹುಬ್ಬಳ್ಳಿ ಮಧ್ಯದಲ್ಲಿ ನೂರು ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಪಾರ್ಕ್ : ಸಚಿವ ಎಂ.ಬಿ ಪಾಟೀಲ್
ಬೆಳಗಾವಿ, ಹುಬ್ಬಳ್ಳಿ ಮಧ್ಯದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ವಿಚಾರವಾಗಿ ಮಾತನಾಡಿದ ಅವರು, ಕಿತ್ತೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕಿತ್ತು. ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿದ್ದರಿಂದ ಇದು ಸಾಧ್ಯವಾಗಿಲ್ಲ. ಬೆಳಗಾವಿ- ಹುಬ್ಬಳ್ಳಿ ನಡುವೆ ಇಂಡಸ್ಟ್ರಿಯಲ್ ಕಾರಿಡಾರ್ ಮಾಡಲು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನ ಸಹ ಮಾಡಲಿದೆ ಎಂದಿದ್ದಾರೆ.