ಶಿವಮೊಗ್ಗ, ಅಕ್ಟೋಬರ್ 20: ಸರ್ಕಾರಿ ಶಾಲೆಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆಗೂ ಅವಕಾಶವಿರಲಿದೆ.ಕರ್ನಾಟಕ ಪಬ್ಲಿಕ್ ಶಾಲೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.