ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ: ಸಚಿವ ಎನ್‌ ಚಲುವರಾಯಸ್ವಾಮಿ ಸ್ಪಷ್ಟನೆ

Ravi Talawar
ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ: ಸಚಿವ ಎನ್‌ ಚಲುವರಾಯಸ್ವಾಮಿ ಸ್ಪಷ್ಟನೆ
WhatsApp Group Join Now
Telegram Group Join Now

ಬೆಂಗಳೂರು,18: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಚಿವ ಎನ್‌ ಚಲುವರಾಯಸ್ವಾಮಿ ಪಾತ್ರ ಕೂಡ ಇದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಆರೋಪಕ್ಕೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ. ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಈ ರೀತಿ ಆರೋಪ ಮಾಡಿದ್ದಾನೆ ಎಂದಿದ್ದಾರೆ.

ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ ಡಿಕೆ ಶಿವಕುಮಾರ್‌, ಕೃಷ್ಣ ಭೈರೇಗೌಡ ಹಾಗೂ ಪ್ರಿಯಾಂಕ್‌ ಖರ್ಗೆ ಅವರ ಮೇಲೆ ಕೂಡ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಈಗಾಗಲೇ ನಾನು ದೇವರಾಜೇಗೌಡ ಅವರ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ದಾಖಲಿಸಲು ನಿರ್ಧರಿಸಿರುವೆ. ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಸತ್ಯಾಂಶ ಆದಷ್ಟು ಬೇಗ ಹೊರ ಬರಲಿದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article