ಬೆಳಗಾವಿ : ಸೋಮನಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 25.64 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹೆಚ್ಚುವರಿ ಕೊಠಡಿ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಕ್ಷೇತ್ರದಲ್ಲಿ ನೂರಾರು ಶಾಲೆಗಳಿಗೆ ಕೊಠಡಿ ನಿರ್ಮಾಣ ಮಾಡಲಾಗಿದೆ. ಶಾಲಾ ಕಂಪೌಂಡ್ ಗಳನ್ನು ನಿರ್ಮಾಣ ಮಾಡಲಾಗಿದೆ. ಆಟದ ಮೈದಾನ ನಿರ್ಮಾಣವಾಗಿದೆ. ಬೆಂಚ್, ಡೆಸ್ಕ್ ಸೇರಿದಂತೆ ಅಗತ್ಯ ಪರಿಕರಗಳನ್ನು ಒದಗಿಸಲಾಗಿದೆ. ಮಕ್ಕಳ ಶಿಕ್ಷಣಕ್ಕೆ ಕೊರತೆಯಾಗದಂತೆ ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಹಾಗಾಗಿ ಪಾಲಕರು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೆ.ಆಂಜನೇಯ, ಶಂಕರಗೌಡ ಪಾಟೀಲ, ಶೇಖರ್ ಹೊಸೂರಿ, ಬಿ.ಎಂ.ಬಡಿಗೇರ್, ಶಿವಾನಂದ, ಯಲ್ಲಪ್ಪ ನಿಟ್ಟೂರ್, ಮಲ್ಲಪ್ಪ ಪೂಜೇರಿ, ಬಾಳಪ್ಪ ಮಾಸ್ತಮರ್ಡಿ, ರಾಮಪ್ಪ ನಿಟ್ಟೂರ್, ಹೊಳೆಪ್ಪ ನಂದ್ಯಾಗೋಳ, ಕಲ್ಲಪ್ಪ ಮಾಸ್ತಮರ್ಡಿ ಇದ್ದರು.