ಬೆಂಗಳೂರು, ಮಾರ್ಚ್ 31: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ . ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ ಹೊರಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಈ ಮಹತ್ವದ ಕೇಂದ್ರ ಇಲ್ಲಿ ಆರಂಭವಾಗುತ್ತಿರುವುದು ಮತ್ತೊಂದು ಗಮನಾರ್ಹ ಸಂಗತಿಯಾಗಿದೆ.
“ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು ಸುಗಮಗೊಳಿಸುವ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವು ಆಸ್ಪತ್ರೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.