ಲೋಕಸಭೆಯ ವಿರೋಧಪಕ್ಷ ನಾಯಕ ರಾಹುಲ್ ಗಾಂಧಿಅವರ ಚಕ್ರವ್ಯೂಹ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಕ್ರವ್ಯೂಹ ರಚನೆಯಾಗುತ್ತಿದೆ ಆದರೆ ಕಾಂಗ್ರೆಸ್ ಹಗರಣಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಎಂದು ಹೇಳಿದ್ದಾರೆ. ಎಎನ್ಐ ಜತೆ ಮಾತನಾಡಿರುವ ಜೋಶಿ, ಇದನ್ನು ಡ್ರಾಮಾಬಾಜಿ ಎಂದು ಕರೆದಿದ್ದಾರೆ, 60 ವರ್ಷಗಳ ಮಾಡಿರುವ ಭ್ರಷ್ಟಾಚಾರ ಮತ್ತು ಹಗರಣವನ್ನು ಮುಚ್ಚಿಹಾಗಲು ಇದೆಲ್ಲವನ್ನೂ ಹೇಳುತ್ತಿದ್ದಾರೆ.
ರಾಹುಲ್ ಗಾಂಧಿ ಹಾಗೂ ಅವರ ತಾಯಿ ರಿಮೋಟ್ ಕಂಟ್ರೋಲ್ ಮೂಲಕ ಸರ್ಕಾರವನ್ನು ಏಕೆ ಹರಿದುಹಾಕಿದರು, ಈಗ ಏಕೆ ನಾಟಕವಾಡುತ್ತಿದ್ದಾರೆ. ತಮ್ಮ ಸರ್ಕಾರದಲ್ಲಿ ಮಾಡಿದ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಇದು ಎಂದಿದ್ದಾರೆ.
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಾ, ದೇಶವು ಈಗ ಕಮಲದ ಚಕ್ರವ್ಯೂಹದಲ್ಲಿ ಸಿಲುಕಿದೆ, 21ನೇ ಶತಮಾನದಲ್ಲಿ ಹೊಸ ಚಕ್ರವ್ಯೂಹವನ್ನು ರಚಿಸಲಾಗಿದೆ ಎಂದು ದೂರಿದ್ದರು.