ಕಾಂಗ್ರೆಸ್‌ನ ರಾಹುಲ್ ಗಾಂಧಿ ಹಿಂದೂ ವಿರೋಧಿ ಘಟನೆಗಳ ಪರಮೋಚ್ಚ ನಾಯಕ: ಸಚಿವ ಪ್ರಲ್ಹಾದ್‌ ಜೋಶಿ

Ravi Talawar
ಕಾಂಗ್ರೆಸ್‌ನ ರಾಹುಲ್ ಗಾಂಧಿ ಹಿಂದೂ ವಿರೋಧಿ ಘಟನೆಗಳ ಪರಮೋಚ್ಚ ನಾಯಕ: ಸಚಿವ ಪ್ರಲ್ಹಾದ್‌ ಜೋಶಿ
WhatsApp Group Join Now
Telegram Group Join Now

ಹುಬ್ಬಳ್ಳಿ,ಏಪ್ರಿಲ್​ 18: ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್‌ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ  ಕಾರಣ. ಬೆಂಗಳೂರಲ್ಲಿ ಜೈಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಮಾಡಲಾದ ಪ್ರಕರಣವೂ ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಲೇ ಆಗಿರುವುದು ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್‌ ಜೋಶಿ, ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲಿನ ಹಲ್ಲೆ ಪ್ರಕರಣವನ್ನು ಕಟುವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಇದೆಲ್ಲ ಆಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಯನಾಡಲ್ಲಿ ತಮ್ಮ ಪಕ್ಷದ ಧ್ವಜ ಬಿಟ್ಟು, ಮುಸ್ಲಿಂ ಲೀಗ್ ಧ್ವಜ ಹಿಡಿದು ನಾಮಪತ್ರ ಸಲ್ಲಿಸಿ ಬಂದಿದ್ದಾರೆ. ಕಾಂಗ್ರೆಸ್‌ನವರ ಇಂಥ ನಡೆ ದೇಶ ವಿದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ಕೊಟ್ಟಿದೆ ಎಂದು ಪ್ರಲ್ಹಾದ್‌ ಜೋಶಿ ಆರೋಪಿಸಿದರು.

ಈ ಹಿಂದೆ ಹಿಂದೂಗಳ ಹತ್ಯೆ, ಹಿಂದೂ ಮಹಿಳೆಯರ ಅತ್ಯಾಚಾರಕ್ಕೆ ಮುಸ್ಲಿಂ ಲೀಗ್ ಕರೆ ಕೊಟ್ಟಿತ್ತು. ಇಂಥ ಒಂದು ವಿದ್ರೋಹಿ ಕೃತ್ಯಗಳ ಪರ ಇರುವ ಮುಸ್ಲಿಂ ಲೀಗ್ ಧ್ವಜ ಹಿಡಿದು ಚುನಾವಣೆಗೆ ಇಳಿದಿದ್ದಾರೆ ರಾಹುಲ್ ಗಾಂಧಿ ಎಂದು ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ, ಈಗ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ… ಇದೆಲ್ಲದ್ದಕ್ಕೂ ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವುದೇ ಕಾರಣ. ಈ ಘಟನೆಗಳು ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ ಎಂದು ಸಚಿವ ಜೋಶಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಉಗ್ರವಾದಿ ಕೃತ್ಯ, ಭಯೋತ್ಪಾದನೆಗೆ ಪ್ರೋತ್ಸಾಹ ಸಿಗುತ್ತಿದೆ. ಜನ ಜಾಗೃತರಾಗಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಜೋಶಿ ಕರೆ ನೀಡಿದರು.

 

WhatsApp Group Join Now
Telegram Group Join Now
Share This Article