ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ

Ravi Talawar
ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 21: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

ರಾಜ್ಯದ ದೇವಾಲಯಗಳು ಭಕ್ತರಿಗೆ ಸುರಕ್ಷಿತ ಮತ್ತು ಆರೋಗ್ಯಕರ ಪ್ರಸಾದ ಮತ್ತು ಆಹಾರವನ್ನು ನೀಡುತ್ತವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮುಜರಾಯಿ ವ್ಯಾಪ್ತಿಯ ದೇಗುಲಗಳ ಪ್ರಸಾದದ ವಿಚಾರದಲ್ಲಿ ಜನರಿಗೆ ಯಾವುದೇ ಅನುಮಾನ ಇರಬಾರದು. ಹೀಗಾಗಿ ಪ್ರಸಾದಗಳ ಪರೀಕ್ಷೆ ನಡೆಸುವಂತೆ ಸುತ್ತೋಲೆ ಹೊರಡಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article