ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ

Ravi Talawar
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 24: ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್​​ಸಿ) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (ಕೆಟಿಆರ್​ಸಿ) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ಸಂಸ್ಥೆಯನ್ನು ನಷ್ಟದಲ್ಲಿಟ್ಟು ಹೋಗಿದೆ. ಪರಿಣಾಮವಾಗಿ ದರ ಏರಿಕೆ ಅನಿಬಾರ್ಯವಾಗಿದೆ ಎಂದಿದ್ದಾರೆ. ಆ ಮೂಲಕ ಟಿಕೆಟ್ ದರ ಏರಿಕೆಯ ಸುಳಿವು ನೀಡಿದ್ದಾರೆ.

WhatsApp Group Join Now
Telegram Group Join Now
Share This Article