ಚ. ಕಿತ್ತೂರು. ಚನ್ನಮ್ಮನ ಕಿತ್ತೂರು ಹಾಗೂ ಖಾನಾಪುರ ಕ್ಷೇತ್ರದಲ್ಲಿ ಕೆಟ್ಟು ಹೋಗಿರುವ ರಸ್ತೆಗಳ ಕುರಿತು ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹಾಗೂ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರ ಮನವಿಯ ಮೇರೆಗೆ ಇಂದು ರಾಜ್ಯ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಯಾವ ಭಾಗಗಳಲ್ಲಿ ಕೆಟ್ಟ ರಸ್ತೆ ಇದೆಯೋ ಅಲ್ಲಿ ಸ್ವತಃ ಸಚಿವರು ಬೇಟಿ ನೀಡಿ, ಸಂಬಂದಿಸಿದ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಆದಷ್ಟು ಬೇಗ ರಸ್ತೆ ಸರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಖಾನಾಪುರ ಶಾಸಕ ವಿಠ್ಠಲ ಹಲಗೇಕರ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.