ಜಿಲ್ಲೆಯ ಅಭಿವೃದ್ಧಿಗೆ ಕ್ಷೇತ್ರದ ಜನರ ಸಹಕಾರ, ಆಶೀರ್ವಾದವೇ ಕಾರಣ: ಸಚಿವ ಸತೀಶ್‌ ಜಾರಕಿಹೊಳಿ  

Hasiru Kranti
ಜಿಲ್ಲೆಯ ಅಭಿವೃದ್ಧಿಗೆ ಕ್ಷೇತ್ರದ ಜನರ ಸಹಕಾರ, ಆಶೀರ್ವಾದವೇ ಕಾರಣ: ಸಚಿವ ಸತೀಶ್‌ ಜಾರಕಿಹೊಳಿ  
WhatsApp Group Join Now
Telegram Group Join Now
ಯಮಕನಮರಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ಕಾರ್ಯಗಳಾಗಿವೆ. ಇದಕ್ಕೆಲ್ಲ ನೀವು ನೀಡಿದ ಸಹಕಾರ, ಆರ್ಶೀವಾದವೇ ಕಾರಣವೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸತೀಶ ಜಾರಕಿಹೊಳಿ ಅವರು ಹೇಳಿದರು.
ಯಮಕನಮರಡಿ ಮತಕ್ಷೇತ್ರದ ಕಲಕಾಂಬ ಗ್ರಾಮದಲ್ಲಿ 1.55 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಮೂರು ಕೊಠಡಿಗಳ ನಿರ್ಮಾಣ, ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಕೊಠಡಿಗಳ ನಿರ್ಮಾಣ, ಎಸ್.ಸಿ.  ಕಾಲೋನಿಯ ಚರಂಡಿ ಹಾಗೂ ರಸ್ತೆ ಸುಧಾರಣೆ, ರಾ.ಹೆ. ಕ್ರಾಸ್‌ನಿಂದ ಶಂಕರ ಬಾಪು ಪಾಟೀಲ ಮನೆವರೆಗೆ ರಸ್ತೆ ಸುಧಾರಣೆ, ಹಳೆಯ ವಿದ್ಯುತ್ ತಂತಿ ಬದಲಾವಣೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ 18 ವರ್ಷ ಅಧಿಕಾರದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮಿಸುತ್ತಿದ್ದು, ಈಗಾಗಲೇ ಮುಚ್ಚಂಡಿ ಗ್ರಾಮದಲ್ಲಿ ಸುಸುಜ್ಜಿತ ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೆಳಗಾವಿ ರಾಷ್ಟ್ರೀಯ  ಹೆದ್ದಾರಿಯಿಂದ ಗೋಕಾಕವರೆಗೂ  ಗುಣಮಟ್ಟದ ರಸ್ತೆ ನಿರ್ಮಾಣ ಹಂತದಲ್ಲಿದೆ. ಈ ರಸ್ತೆ ನಿರ್ಮಾಣದಿಂದ ನೂರಾರು ವಾಹಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ನಮ್ಮ ಇಲಾಖೆಯಿಂದ ಶೀಘ್ರವೇ ಮೂರು ಮರಾಠಿ ಶಾಲೆಗಳ ಕಟ್ಟಡ ನಿರ್ಮಾಣವಾಗಲಿವೆ. 4 ಗುಂಟೆ ಜಾಗದಲ್ಲಿ ಕಲಕಾಂಬ ಗ್ರಾಮದಲ್ಲಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ನೀಡುವ ಪ್ರಯತ್ನ ಮಾಡಲಾಗುವುದು ಎಂದು ಇದೇ ವೇಳೆ ಭರವಸೆ ನೀಡಿದರು.
ಬಿಇಓ ಆಂಜನೇಯ ರೊಗನ್ನವರ ಮಾತನಾಡಿ, ಯಮಕನಮರಡಿ ಕ್ಷೇತ್ರದಲ್ಲಿ  72 ಶಾಲಾ ಕೊಠಡಿಗಳು ಮಂಜೂರಾಗಿದ್ದು, ಕಾಮಗಾರಿಗಳಿಗೆ ಚಾಲನೆ ದೊರೆತಿದೆ. ಶಿಕ್ಷಣ ಕ್ಷೇತ್ರಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಮೊದಲ ಪ್ರಾಶಸ್ತ್ಯ ನೀಡಿದಾರೆ.  ಶಾಸಕರ ವಿಶೇಷ ಪ್ರಯತ್ನದಿಂದ ಇಲ್ಲಿನ ಮಕ್ಕಳಿಗೆ ಅನುಕೂಲವಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ  ಅರವಿಂದ ಕಾರ್ಚಿ, ಮಲಗೌಡ ಪಾಟೀಲ್‌, ಗ್ರಾಪಂ ಅಭಿವೃದ್ಧಿ ಅಧಿಕಾರಿ ಗೋಪಾಲ್‌ ಗುಡಸಿ,  ಮಲ್ಲಿಕಾರ್ಜುನ ಪತ್ತಾರ, ಗುತ್ತಿಗೆದಾರ ಪ್ರವೀಣ ಹಿರೇಮಠ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು
WhatsApp Group Join Now
Telegram Group Join Now
Share This Article